ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರು ನಗರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ್ಯ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಾಕಷ್ಟು ಕಟ್ಟಡ ಕಾರ್ಮಿಕರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ತಮ್ಮ ಮನೆಗಳನ್ನು ಕಟ್ಟಿಕೊಳ್ಳಲು ಪ್ರತಿ ಕಾರ್ಮಿಕನಿಗೆ ತಲಾ 5 ಲಕ್ಷ ಹಣ ಬಿಡುಗಡೆ ಮಾಡ್ಬೇಕು ಹಾಗೂ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡ್ಬೇಕು, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಿಸಿ ವೃತ್ತ ತಲುಪಿ ಜಿಲ್ಲಾಧಿಕಾರಿ ಕಛೇರಿಗೆ ತಲುಪಿ ಅಪರ ಜಿಲ್ಲಾಧಿಕಾರಿ ಸಂಗಪ್ಪನವರಿಗೆ ಮನವಿ ಸಲ್ಲಿಸಿದರು.