ಚಿತ್ರದುರ್ಗ: ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, 8 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಕಪ್ಲಿಹಟ್ಟಿ ಬಳಿ ನಡೆದಿದೆ.
ಕಲಬುರಗಿಯಿಂದ ಬೆಂಗಳೂರು ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಹಿರಿಯೂರು ತಾಲೂಕಿನಿಂದ ಚಳ್ಳಕೆರೆ ಕಡೆ ಹೊರಟಿದ್ದ ಲಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ ಪ್ರೇಮನಾಥ್ (45) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.