ಚಿತ್ರದುರ್ಗ: ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ನೀಡಬೇಕು ಎಂದು ಆದೇಶ ಹೊರಡಿಸಿತ್ತು.
ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಹಣ ವಸೂಲಿ, ತೂಕದಲ್ಲಿ ಮೋಸಕ್ಕಿಳಿದಿದೆಯಾ ಮೂರು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಈಟಿವಿ ಭಾರತ ವಿಸ್ತೃತ ವರದಿ ಮಾಡಿತ್ತು. ವರದಿ ಗಮನಿಸಿದ ಆಹಾರ ಸರಬರಾಜು ಇಲಾಖೆ ಪರವಾನಗಿ ರದ್ದು ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ನಗರದ ಗಾಂಧಿನಗರ ಬಡಾವಣೆ ಹಿರಿಯೂರು ತಾಲೂಕಿನ ಬಬ್ಬೂರು, ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಆದೇಶ ಹೊರಡಿಸಿರುವುದು ಈಟಿವಿ ಭಾರತ ವರದಿಗೆ ಜಯ ಸಿಕ್ಕಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಮೋಸದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದರಿಂದ ತಹಶೀಲ್ದಾರ್ ವೆಂಕಟೇಶಯ್ಯ, ಆಹಾರ ಇಲಾಖೆ ಅಧಿಕಾರಿಗಳಿಂದ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಆದೇಶ ಹೊರಡಿಸಿ, ಉಳಿದ ಉಚಿತ ಪಡಿತರ ವಿತರಿಸಿ ನಿಯಮ ಪಾಲಿಸುವಂತೆ ಎಚ್ಚರಿಕೆ ಇಲಾಖೆಯ ಉಪ ನಿರ್ದೇಶಕ ಕೆ.ಪಿ.ಮಧುಸೂದನ್ ಖಡಕ್ ಸಂದೇಶ ರವಾನಿಸಿದರು.