ಚಿತ್ರದುರ್ಗ: ವಿದ್ಯುತ್ ಕಂಬಕ್ಕೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡಿದಿದ್ದು, ಭಾರೀ ಅನಾಹುತ ತಪ್ಪಿರುವ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನ ರಸ್ತೆಯಲ್ಲಿದ್ದ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ವಿದ್ಯುತ್ ತಂತಿ ತುಂಡಾಗದ ಪರಿಣಾಮ ಭಾರಿ ಅನಾಹುತ ತಪ್ಪಿದೆ. ಇನ್ನೂ ವಾಹನದೊಳಗಿದ್ದ ಕ್ಲೀನರ್, ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಾಹಿತಿ ತಿಳಿದ ಚಳ್ಳಕೆರೆ ಪೋಲಿಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.