ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳು ಬಳಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ಓರ್ವ ಚಾಲಕ ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇನ್ನು ಇಬ್ಬರು ಮಹಿಳೆಯರು ಹಾಗೂ ನಾಲ್ಕು ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಸಾವನ್ನಪ್ಪಿದ್ದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ.