ETV Bharat / state

ಆಮೆಗತಿಯಲ್ಲಿ ಸಾಗುತ್ತಿರುವ ಸಿಸಿ ರಸ್ತೆ ಕಾಮಗಾರಿ.. ಆಕ್ರೋಶ ವ್ಯಕ್ತಪಡಿಸುತ್ತಿರುವ ಚಿತ್ರದುರ್ಗ ಜನತೆ - CC road work problem

ನಗರದ ಚಳಕೆರೆ ಗೇಟ್ ಮಾರ್ಗವಾಗಿ ಪ್ರವಾಸಿ ಮಂದಿರ, ಹಲವು ಜಿಲ್ಲಾಸ್ಪತ್ರೆ ಸೇರಿದಂತೆ ಸಾರ್ವಜನಿಕ ಕಚೇರಿಗಳಿವೆ. ಜಿಲ್ಲೆಯ ಜನತೆ ಕಚೇರಿ ಕಾರ್ಯಗಳಿಗಾಗಿ ಬರಬೇಕು ಎಂದರೆ ಇದೇ ರಸ್ತೆಯಲ್ಲಿ ಸಾಗಬೇಕಿದ್ದು, ಒಂದೇ ರಸ್ತೆಯಲ್ಲಿ ದ್ವಿಮುಖ ಸಂಚಾರದಲ್ಲಿ ಬರಬೇಕಿದೆ. ಹೀಗಾಗಿ ಸ್ವಲ್ಪ ಆಯ ತಪ್ಪಿದರೂ ಕಾಮಗಾರಿ ಸ್ಥಳದಲ್ಲಿ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ಭಯ ಜನರಲ್ಲಿ ಕಾಡುತ್ತಿದೆ.

CC road work leads to problem for chitradurga people
ಆಮೆಗತಿಯಲ್ಲಿ ಸಾಗುತ್ತಿರುವ ಸಿಸಿ ರಸ್ತೆ ಕಾಮಗಾರಿ....ಆಕ್ರೋಶ ವ್ಯಕ್ತಪಡಿಸುತ್ತಿರುವ ಚಿತ್ರದುರ್ಗ ಜನತೆ
author img

By

Published : Jan 7, 2021, 7:25 AM IST

Updated : Jan 7, 2021, 7:32 AM IST

ಚಿತ್ರದುರ್ಗ: ಚಿತ್ರದುರ್ಗ ನಗರದ ಬಹುತೇಕ ರಸ್ತೆಗಳ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಆರಂಭವಾಗಿ ವರ್ಷವೇ ಕಳೆದರೂ ಈವರೆಗೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದಕ್ಕೆ ನಗರ ನಿವಾಸಿಗಳು ಹಾಗೂ ಪ್ರವಾಸಿಗರು ಪರದಾಟ ನಡೆಸುವಂತಾಗಿದೆ.

ಆಮೆಗತಿಯಲ್ಲಿ ಸಾಗುತ್ತಿರುವ ಸಿಸಿ ರಸ್ತೆ ಕಾಮಗಾರಿ

ನಗರದ ಚಳಕೆರೆ ಗೇಟ್ ಮಾರ್ಗವಾಗಿ ಪ್ರವಾಸಿ ಮಂದಿರ, ಹಲವು ಜಿಲ್ಲಾಸ್ಪತ್ರೆ ಸೇರಿದಂತೆ ಸಾರ್ವಜನಿಕ ಕಚೇರಿಗಳಿವೆ. ಜಿಲ್ಲೆಯ ಜನತೆ ಕಚೇರಿ ಕಾರ್ಯಗಳಿಗಾಗಿ ಬರಬೇಕೆಂದರೆ ಇದೇ ರಸ್ತೆಯಲ್ಲಿ ಸಾಗಬೇಕಿದ್ದು, ಒಂದೇ ರಸ್ತೆಯಲ್ಲಿ ದ್ವಿಮುಖ ಸಂಚಾರದಲ್ಲಿ ಬರಬೇಕಿದೆ. ಹೀಗಾಗಿ ಸ್ವಲ್ಪ ಆಯ ತಪ್ಪಿದರೂ ಕಾಮಗಾರಿ ಸ್ಥಳದಲ್ಲಿ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ಭಯ ಜನರಲ್ಲಿ ಕಾಡುತ್ತಿದೆ.

ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಾರ್ವಜನಿಕರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಇಂದು ಮುಗಿಯುತ್ತೆ, ನಾಳೆ ಮುಗಿಯುತ್ತದೆ ಎಂದು ಹೇಳಿಕೊಂಡು ಬಂದಿದ್ದಾರಂತೆ. ಒಂದೂವರೆ ವರ್ಷಗಳಿಂದ ಆಮೆಗತಿಯಲ್ಲಿ ಸಿಸಿ ರಸ್ತೆ ಕಾಮಗಾರಿ ಸಾಗುತ್ತಿದೆಯೆಂದು ಸಾರ್ವಜನಿಕರು ಅಧಿಕಾರಿಗಳ ಮೇಲೆ ದೂರುತ್ತಿದ್ದಾರೆ.

ಹೆಚ್ಚುತ್ತಿರುವ ಧೂಳು:

ಬಸ್ ನಿಲ್ದಾಣ ರಸ್ತೆ, ರೈಲು ನಿಲ್ದಾಣದ ರಸ್ತೆ ಸೇರಿದಂತೆ ಹಲವು ಕಡೆ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ನಿತ್ಯವೂ ಕಾಮಗಾರಿ ಪಕ್ಕದ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವುದರಿಂದ ನಗರದಲ್ಲಿ ಧೂಳು ಹೆಚ್ಚಾಗುತ್ತಿದೆ ಎಂಬ ಆರೋಪ ಕೇಳಿ‌ ಬರುತ್ತಿದೆ‌. ಅಲ್ಲದೇ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನಗರ ನಿವಾಸಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: ಹುತಾತ್ಮ ಯೋಧ ಶಿವಾನಂದ ಬಡಿಗೇರ ಸಮಾಧಿ ಬಳಿ ಸ್ಮಾರಕ ನಿರ್ಮಾಣ ಯಾವಾಗ?

25 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಗುತ್ತಿಗೆದಾರರು ನಿಗದಿತ ಅವಧಿಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸದಿರುವುದು ಮಾತ್ರ ಪ್ರವಾಸಿಗರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆ ಸೃಷ್ಟಿಮಾಡಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪರ್ಯಾಯ ರಸ್ತೆಗೆ ಒತ್ತಾಯ:

ಸಾವಿರಾರು ಪ್ರವಾಸಿಗರು ನಿತ್ಯ ನಗರಕ್ಕೆ ಭೇಟಿ ನೀಡುತ್ತಾರೆ. ಕಾಮಗಾರಿ ಮುಗಿಯುವವರೆಗೂ ಪರ್ಯಾಯ ಮಾರ್ಗಕ್ಕೆ ನಗರ ನಿವಾಸಿಗಳು ಒತ್ತಾಯಿಸುತ್ತಿದ್ದಾರೆ. ಅಲ್ಲದೇ, ಇತ್ತ ರಾಷ್ಟ್ರೀಯ ಹೆದ್ದಾರಿ ಮೂಲಕ ಬರುವ ಲಾರಿಗಳು ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಈ ಕುರಿತು ಚಿತ್ರದುರ್ಗ ನಗರ ಶಾಸಕ ಜಿಎಚ್ ತಿಪ್ಪಾರೆಡ್ಡಿ ಅವರನ್ನು ಕೇಳಿದ್ರೆ, ನಗರದ ಸಿಸಿ ರಸ್ತೆ ಕಾಮಗಾರಿಗಳು ಮುಗಿಯಲು ತಡ ಆಗುತ್ತಿರುವುದು ನಿಜ. ರಸ್ತೆ ಅಗಲೀಕರಣದ ಹೆಸರಿನಲ್ಲಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಸಿಸಿ ಕಾಮಗಾರಿಗಳ ಆಗಿರುವುದರಿಂದ ಸ್ವಲ್ಪ ತಡವಾಗುತ್ತದೆ. ಬರುವ ಮಾರ್ಚ್ ತಿಂಗಳ ಒಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದು ಈಟಿವಿ ಭಾರತಕ್ಕೆ ಶಾಸಕರು ತಿಳಿಸಿದ್ದಾರೆ.

Last Updated : Jan 7, 2021, 7:32 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.