ಚಿತ್ರದುರ್ಗ: ಶುಗರ್ ಲೋ ಆಗಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥರಾಗಿದ್ದು, ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿನ ಹೆಬ್ಬಾಳದಲ್ಲಿನ ಆಸ್ಟರ್ ಆಸ್ಪತ್ರೆಗೆ ಝೀರೋ ಟ್ರಾಫಿಕ್ ಮೂಲಕ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿದೆ.
ಸದಾನಂದಗೌಡರ ಆರೋಗ್ಯ ಸ್ಥಿರವಾಗಿದ್ದು ರಸ್ತೆ ಮೂಲಕ ಬೆಂಗಳೂರಿಗೆ ಮರಳುತ್ತಿದ್ದಾರೆ, ಏರ್‌ಲಿಫ್ಟ್ ಮಾಡುತ್ತಿಲ್ಲ. ಸಚಿವರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ ಎನ್ನುವ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾಗಿದೆ ಎಂದು ಸಚಿವರ ಕಚೇರಿ ಮಾಹಿತಿ ನೀಡಿದೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿಸಿ ಮರಳುತ್ತಿದ್ದಾಗ ಶುಗರ್ ಲೋ ಆಗಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.