ಚಿತ್ರದುರ್ಗ : ವಿವಿ ಸಾಗರ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಲು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆದೇಶ ಆಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಲ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ವೇದಾವತಿ ನದಿಗೆ 0.25 ಟಿಎಂಸಿ ನೀರು ಹರಿಸಲು ಬಿ.ಎಸ್ ಯಡಿಯೂರಪ್ಪ ಸರ್ಕಾರ ಕಾರಣ ಎಂದು ಕೆಲವರು ಹೇಳುತ್ತಿದ್ದಾರೆ. ನಾನು ಬರೀ ಮಾತಿನಲ್ಲಿ ಹೇಳುವುದಿಲ್ಲ. ದಾಖಲೆ ನಿಡುತ್ತೇನೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನೀರು ಹರಿಸಲು ಆದೇಶ ಆಗಿತ್ತು ಎಂದು ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿಗೆ ಪ್ರತ್ಯುತ್ತರ ನೀಡಿದರು.
2015ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನೀರು ಹರಿಸಲು ಆದೇಶ ಹೊರಡಿಸಲಾಗಿತ್ತು. ಈ ಬಗ್ಗೆ ದಾಖಲೆ ಸಮೇತ ಚರ್ಚೆಗೆ ಬರುತ್ತೇನೆ ಎಂದರು.