ETV Bharat / state

ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ಬಿ.ವೈ.ವಿಜಯೇಂದ್ರ - ramesh jarakiholi cd case

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸತ್ಯ ಹೊರ ಬರಲಿದೆ. ನಿನ್ನೆ ರಮೇಶ್ ಅವರು ದೂರು ನೀಡಿದ್ದಾರೆ. ಯಾವುದನ್ನೂ ಸಹ ಮುಚ್ಚಿಡುವುದು ಅಸಾಧ್ಯ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೂ ಉದ್ಭವಿಸಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

change-of-bjp-state-president-is-out-of-the-question
ಬಿವೈ ವಿಜಯೇಂದ್ರ
author img

By

Published : Mar 14, 2021, 5:23 PM IST

ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆ ಉದ್ಭವಿಸಿಲ್ಲ ಎಂದು ನಗರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿಕೆ

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸತ್ಯ ಹೊರ ಬರಲಿದೆ. ನಿನ್ನೆ ರಮೇಶ್ ಅವರು ದೂರು ನೀಡಿದ್ದಾರೆ, ಯಾವುದನ್ನೂ ಸಹ ಮುಚ್ಚಿಡುವುದು ಅಸಾಧ್ಯ ಎಂದರು.

ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಜೈ ಶ್ರೀರಾಮ್ ಘೋಷಣೆ ಕೂಗಿದ ಬಿಜೆಪಿಗರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಭದ್ರಾವತಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ. ಭದ್ರಾವತಿ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆದಿದೆ‌. ಕಾಂಗ್ರೆಸ್ ಪಕ್ಷ‌ ಅದನ್ನು ಬೆಂಬಲಿಸಿ ಅಸ್ತಿತ್ವ ಹುಡುಕುತ್ತಿದೆ. ಇಂತಹ ಗುಂಡಾಗರ್ದಿಗೆ ಬಿಎಸ್​ವೈ ನೇತೃತ್ವದ ಸರ್ಕಾರ ಅವಕಾಶ ನೀಡಲ್ಲ ಎಂದು ಗುಡುಗಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.