ಚಿತ್ರದುರ್ಗ : ನಿನ್ನೆ ಬಂದ ವರದಿಗಳ ಪೈಕಿ ಒಟ್ಟು 3 ಜನರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. 77 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಇದುವರೆಗೂ 1111 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ ಈವರೆಗೆ 945 ಜನರ ವರದಿ ನೆಗೆಟಿವ್ ಎಂದು ಬಂದಿವೆ. ಇನ್ನುಳಿದ 122 ಜನರ ಪರೀಕ್ಷಾ ವರದಿ ವೈದ್ಯರ ಕೈ ಸೇರಬೇಕಿದೆ. ಸದ್ಯ ಜಿಲ್ಲೆಯಲ್ಲಿ 256 ಜನರನ್ನು ಹೋಂ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ.
ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹಿನ್ನೆಲೆ ಹೊಂದಿರುವ 256 ಜನರನ್ನು ಹೋಂ ಕ್ವಾರಂಟೈನ್‌ನಲ್ಲಿ ನಿಗಾನಲ್ಲಿ ಇರಿಸಲಾಗಿದೆ. 968 ಜನರಿಗೆ ಮೇ 8ರಂದು ಸ್ಕ್ರೀನಿಂಗ್ ಮಾಡಲಾಗಿದೆ. ಇದುವರೆಗೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಈ ಜಿಲ್ಲೆಗೆ ಆಗಮಿಸಿದ 2,39,545 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಮೇ 8ರಂದು ಫೀವರ್ ಕ್ಲಿನಿಕ್‍ಗಳಲ್ಲಿ 230 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ನಲ್ಲಿ ಒಟ್ಟು 12,423 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 505 ಜನರಿಗೆ ಮಾನಸಿಕ ಆರೋಗ್ಯ ತಜ್ಞರಿಂದ ಮೂರ್ನಾಲ್ಕು ದಿನಗಳಿಗೊಮ್ಮೆ ಆಪ್ತ ಸಮಾಲೋಚನೆ ಮಾಡಿಸಲಾಗಿದೆ. ಸದ್ಯ 29 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಉಸಿರಾಟದ ತೊಂದರೆ, ತೀವ್ರ ಜ್ವರದಂತಹ ಆರೋಗ್ಯ ಸಮಸ್ಯೆ ಹೊಂದಿರುವ 946 ರೋಗಿಗಳ ತಪಾಸಣೆ ಮಾಡಲಾಗಿದೆ.