ಚಿತ್ರದುರ್ಗ: ಮಹಾಮಾರಿ ಕೊರೊನಾ ಸೋಂಕನ್ನು ತಡೆಗಟ್ಟುವ ಸಲುವಾಗಿ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ಭೇಟಿಗೆ ಸರ್ಕಾರ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಚಿತ್ರದುರ್ಗ ಆಡುಮಲ್ಲೇಶ್ವರ ಮೃಗಾಲಯಕ್ಕೆ ಇಂದಿನಿಂದ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಸತತ ಎರಡು ತಿಂಗಳಿನಿಂದ ಲಾಕ್ ಡೌನ್ ಆಗಿದ್ದ ಮೃಗಾಲಯ ಇಂದಿನಿಂದ ತನ್ನ ಕಾರ್ಯವನ್ನು ಆರಂಭಿಸಿದೆ.
ಚಿತ್ರದುರ್ಗ ಹೊರವಲಯದ ಜೋಗಿಮಟ್ಟಿ ವನ್ಯಧಾಮ ತಪ್ಪಲಲ್ಲಿರುವ ಈ ಆಡುಮಲ್ಲೇಶ್ವರ ಮೃಗಾಲಯದಲ್ಲಿನ ಕಾಡು ಪ್ರಾಣಿಗಳನ್ನು ವೀಕ್ಷಿಸಲು ನಾನಾ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದರು. ಲಾಕ್ ಡೌನ್ ಘೋಷಣೆಯಾದಾಗಿನಿಂದ ಪ್ರವಾಸಿಗರಿಲ್ಲದೇ ಇಡೀ ಮೃಗಾಲಯ ಭಣಗುಡುತ್ತಿತ್ತು. ಆದರೆ ಇಂದಿನಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಅಡುಮಲ್ಲೇಶ್ವರ ಮೃಗಾಲಯವನ್ನು ಪ್ರವಾಸಿಗರಿಗೆ ಮುಕ್ತಗೊಳಿಸಿದ್ದಾರೆ.
ಎರಡು ತಿಂಗಳ ಕಾಲ ಮೃಗಾಲಯವನ್ನು ಬಂದ್ ಮಾಡಿದ್ದರಿಂದ ಅರಣ್ಯ ಇಲಾಖೆಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.