ಚಿತ್ರದುರ್ಗ: ಜಿಲ್ಲಾ ಆರೋಗ್ಯ ಇಲಾಖೆ ಘೋಷಣೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ನಿನ್ನೆ 63 ಜನರಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದ್ದು, ಸೋಂಕಿತರ ಸಂಖ್ಯೆ 12,119ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಆಸ್ಪತ್ರೆ ಸೇರಿದಂತೆ ವಿವಿಧ ಕೋವಿಡ್ ಕೇರ್ ಸೆಂಟರ್ಗಳಿಂದ 75 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2241 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದ್ದು, 63 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಕೊರೊನಾದಿಂದಾಗಿ 58 ಜನ ಮೃತಪಟ್ಟರೆ, ಒಬ್ಬರು ಮಾತ್ರ ಇತರೆ ಕಾರಣದಿಂದ ಸಾವನಪ್ಪಿರುವುದು ವರದಿಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 12,119ಕ್ಕೆ ಏರಿಕೆಯಾಗಿದೆ. 11,348 ಜನ ಸೋಂಕಿನಿಂದ ಗುಣಮುಖರಾದರೆ, ಇನ್ನುಳಿದ 712 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.