ಚಿತ್ರದುರ್ಗ: ನಗರದ ಆರಾಮ್ ವಿಹಾರ್ ಗ್ರೂಪ್ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಅಗತ್ಯದ ಆಹಾರ ಸಾಮಗ್ರಿ ಒಳಗೊಂಡ ಕಿಟ್‍ಗಳನ್ನು ವಿತರಿಸಿದ್ರು.
ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಲಾಕ್‍ಡೌನ್ ಜಾರಿಗೊಳಿಸಿದ್ದು, ಈ ಕಾರಣದಿಂದಾಗಿ ಕೂಲಿ ಕಾರ್ಮಿಕರಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತವಾಗಿ ದಿನನಿತ್ಯದ ಅಗತ್ಯದ ಆಹಾರ ಸಾಮಗ್ರಿ ಒಳಗೊಂಡ ಕಿಟ್‍ಗಳನ್ನ ವಿತರಿಸಲಾಯಿತು.