ಚಿತ್ರದುರ್ಗ: ದೇಶದಲ್ಲಿ ಸಿಎಎ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯ ನಡುವೆಯೂ ಕಿಸಾನ್ ಸಂಘಟನೆ ವತಿಯಿಂದ ರೈತರು ಧರಣಿ ನಡೆಸಿದರು.
ಡಿಸಿ ಕಚೇರಿ ಎದುರು ಜಮಾಯಿಸಿದ ರೈತರು, ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅನ್ಯಾಯ ಆರೋಪ ಕೇಳಿ ಬಂದಿದೆ. ಭೂ ಪರಿಹಾರ, ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ರೈತರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದರು.
ಇದೇ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರಲ್ಲದೇ ಕಾಮಗಾರಿ ನಡೆಸಿದ್ದ ಗುತ್ತಿಗೆದಾರರನ್ನು ಬಂಧಿಸುವಂತೆ ಒತ್ತಾಯಿಸಲಾಯಿತು.