ಚಿತ್ರದುರ್ಗ: ಎತ್ತಿನ ಗಾಡಿಯಲ್ಲಿ ಮಣ್ಣು ತರಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹರೀಶ (24), ನಂದೀಶ (35) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮನಮೈನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಮಣ್ಣು ತುಂಬಿ ತರಲು ತೆರಳಿದ್ದ ವೇಳೆ ಮಣ್ಣಿನ ದಿಬ್ಬ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.