ETV Bharat / state

ಚಿತ್ರದುರ್ಗದಲ್ಲಿ 31 ಜನರ ಸ್ಯಾಂಪಲ್ಸ್​ ಸಂಗ್ರಹ: 71 ಜನರ ವರದಿಗಾಗಿ ನಿರೀಕ್ಷೆ

ಚಿತ್ರದುರ್ಗದಲ್ಲಿ ಇಂದು 31 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ 887 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 775 ಜನರ ವರದಿ ನೆಗೆಟಿವ್ ಬಂದಿವೆ. 71 ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದೆ.

31 ಜನರ ಸ್ಯಾಂಪಲ್ಸ್ ಸಂಗ್ರಹ
31 ಜನರ ಸ್ಯಾಂಪಲ್ಸ್ ಸಂಗ್ರಹ
author img

By

Published : May 6, 2020, 5:43 PM IST

ಚಿತ್ರದುರ್ಗ: ಕೊರೊನಾ ವೈರಸ್​​ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಒಟ್ಟು 31 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಇದುವರೆಗೂ 887 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 775 ಜನರ ವರದಿ ನೆಗೆಟಿವ್ ಬಂದಿವೆ. 71 ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಇದುವರೆಗೂ ಜಿಲ್ಲೆಯ ಭೀಮಸಮುದ್ರದಲ್ಲಿ ವರದಿಯಾಗಿದ್ದ 1 ಕೋವಿಡ್-19 ಪ್ರಕರಣ ಹೊರತುಪಡಿಸಿ ಬೇರೆ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹೊಂದಿರುವ 256 ಜನರನ್ನು ಹೋಮ್​​​ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಮೇ. 5ರಂದು 904 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದ್ದು, ಇದುವರೆಗೂ ಹೊರ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಂದ ಆಗಮಿಸಿರುವ 2,36,415 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಮೇ. 5ರಂದು ಫೀವರ್ ಕ್ಲಿನಿಕ್‍ಗಳಲ್ಲಿ 271 ಜನರಿಗೆ ಜ್ವರ ತಪಾಸಣೆ ಮಾಡಿದ್ದು, ಇದುವರೆಗೂ ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ನಲ್ಲಿ ಒಟ್ಟು 11,768 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಸದ್ಯ 9 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಉಸಿರಾಟದ ತೊಂದರೆ, ತೀವ್ರ ಜ್ವರದಂತಹ ಆರೋಗ್ಯ ಸಮಸ್ಯೆ ಹೊಂದಿರುವ 847 ರೋಗಿಗಳಿಗೆ ತಪಾಸಣೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.