ಚಿತ್ರದುರ್ಗ: ಇಂದಿನಿಂದ ನಡೆಯುವ ಪಿಯುಸಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂಗ್ಲೀಷ್ ಪತ್ರಿಕೆಗೆ ಇಂದು ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 15339 ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗಲಿದ್ದಾರೆ. ಇನ್ನು 822 ಜನ ವಿದ್ಯಾರ್ಥಿಗಳು ಹೊರ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಇಂದು ಬೆಳಗ್ಗೆ 10.15 ರಿಂದ ಆರಂಭವಾಗಲಿರುವ ಪರೀಕ್ಷೆ 1.30 ರ ವರೆಗೆ ನಡೆಯಲಿದೆ. ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾ ಶಿಕ್ಷಣ ಇಲಾಖೆ ಸ್ಥಾಪನೆ ಮಾಡಿದೆ. ಚಿತ್ರದುರ್ಗ- 06, ಹೊಳಲ್ಕೆರೆ - 03, ಹೊಸದುರ್ಗ - 03, ಚಳ್ಳಕೆರೆ - 03, ಮೊಳಕಾಲ್ಮೂರು-02, ಹಿರಿಯೂರು - 03 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಇನ್ನು ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಿ ಆಗಮಿಸಬೇಕಾಗುತ್ತದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 24 ವಿಧ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಪರೀಕ್ಷೆ ಮುನ್ನವೇ ಎಲ್ಲಾ ಡೆಸ್ಕ್ಗಳಿಗೆ ಮೊದಲೇ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ಕಂಟೈನ್ಮೆಂಟ್ ಝೋನ್ಗಳಿಲ್ಲ. ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಪಿಯು ಡಿಡಿ ಶೋಭಾ ಹೇಳಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.