ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ನಲ್ಲಿ 'ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ' ನಡೆಯುತ್ತಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದಿದ್ದಾರೆ.
ಹಿಜಾಬ್ ತೆಗೆದು ತರಗತಿಗೆ ಪ್ರವೇಶಿಸುವಂತೆ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದಾರೆ. ಆದರೆ, ವಿದ್ಯಾರ್ಥಿನಿಯರು ನಾವು ಪರೀಕ್ಷೆ ಬೇಕಾದರೆ ಬರೆಯುವುದಿಲ್ಲ. ಆದರೆ, ಹಿಜಾಬ್ ತೆಗೆಯುವುದಿಲ್ಲ ಎಂದು ವಾದ ಮಾಡಿದ್ದರೆ. ಹಿಜಾಬ್ಗೆ ಅವಕಾಶ ಕೊಡದ ಹಿನ್ನೆಲೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ವಾಪಸ್ ತೆರಳಿದ್ದಾರೆ.
ಇದಕ್ಕೆ ವಿದ್ಯಾರ್ಥಿನಿಯರ ಪೋಷಕರು ಕೂಡ ಸಾಥ್ ನೀಡಿದ್ದಾರೆ. ಕಾಲೇಜು ಆವರಣದ ಮುಂದೆ ಜಮಾಯಿಸಿದ ನೂರಾರು ಮಂದಿ ಮುಸ್ಲಿಂ ಸಮುದಾಯದವರು, ನಮ್ಮ ಮಕ್ಕಳು ಹಿಜಾಬ್ ಧರಿಸಿಯೇ ತರಗತಿಗೆ ಬರುತ್ತಾರೆ ಎಂದು ವಾದ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಮಾಡಿದರೂ ಸಹ ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಎಸ್‌ವಿಎಸ್ ಪಬ್ಲಿಕ್ ಶಾಲೆ ಮತ್ತು ಪೋಷಕರ ನಡುವೆ ಹಿಜಾಬ್ ವಿಚಾರವಾಗಿ ಗದ್ದಲ