ಚಿತ್ರದುರ್ಗ: ನಗರದಲ್ಲಿ ನಗರೋತ್ಥಾನ-3 ಯೋಜನೆಯಡಿ ₹29.75 ಕೋಟಿ ರೂ. ವೆಚ್ಚದಲ್ಲಿ ಒಟ್ಟು 33 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ತಿಳಿಸಿದರು.
ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ನಡೆಯುತ್ತಿರುವ ಕಡೆ ಭೇಟಿ ನೀಡಿ ಮಾತನಾಡಿದ ಅವರು, ನಗರದ ಸೌಂದರ್ಯೀಕರಣ ದೃಷ್ಟಿಯಿಂದ ಪ್ರಮುಖ 4 ವೃತ್ತಗಳನ್ನು ಸುಮಾರು ₹2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.
ಅಲ್ಲದೆ, ಅಮೃತ್ ಸಿಟಿ ಯೋಜನೆಯಡಿ ಕುಡಿಯುವ ನೀರು, ಪಾರ್ಕ್‍ಗಳ ಅಭಿವೃದ್ಧಿ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಒನಕೆ ಓಬವ್ವ ವೃತ್ತ, ಮದಕರಿ ವೃತ್ತ, ಡಾ. ಅಂಬೇಡ್ಕರ್ ವೃತ್ತ ಹಾಗೂ ಮಹಾತ್ಮಾ ಗಾಂಧಿ ವೃತ್ತವನ್ನು ₹2 ಕೋಟಿ ರೂ. ಗೂ ಹೆಚ್ಚಿನ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಅಂದಾಜು ಮಾಡಲಾಗಿದೆ ಎಂದರು.