ಚಿತ್ರದುರ್ಗ: ಕಾಲು ಜಾರಿ ಕಾಲುವೆಗೆ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದಲ್ಲಿ ನಡೆದಿದೆ.
ಬಬ್ಬೂರು ಗ್ರಾಮದ ವಿಶಾಲಾಕ್ಷಿ (48) ಮೃತ ದುರ್ದೈವಿ. ಬಟ್ಟೆ ತೊಳೆಯಲು ಕಾಲುವೆ ಬಳಿ ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.