ಚಿತ್ರದುರ್ಗ: ಚಳ್ಳಕೆರೆಯ ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಡಿವೈಎಸ್ ಪಿ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ 56 ವರ್ಷದ ಎಎಸ್ಐಗೆ ಕೊರೊನಾ ಸೋಂಕು ಕಂಡುಬಂದಿದ್ದು, ಈ ಹಿನ್ನೆಲೆ ಡಿವೈಎಸ್ ಪಿ ಕಚೇರಿಯನ್ನು 7 ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ.
ಡಿವೈಎಸ್ ಪಿ ಸೇರಿದಂತೆ ಆರು ಜನ ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಉಳಿದ ಸಿಬ್ಬಂದಿಯಲ್ಲೂ ಮನೆಮಾಡಿದೆ. ಪೊಲೀಸರಲ್ಲೇ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಜಾಗೃತಿ ಮೂಡಿಸುವ ಜೊತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.