ETV Bharat / state

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಚರ್ಚೆ ಆಗಿದೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು. ದಿನಾಂಕವನ್ನು ಹೈಕಮಾಂಡ್​ ನಿಗದಿ ಮಾಡಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

cm basavaraj bommai
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Jan 8, 2023, 7:25 AM IST

Updated : Jan 8, 2023, 7:55 AM IST

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ

ಚಿತ್ರದುರ್ಗ : ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕಮಾಂಡ್​ ಜೊತೆ ವಿಸ್ತೃತ ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಎಂ ಹೇಳಿಕೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಸಂತಸ ಮೂಡಿಸಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ಒಂದು​ ಸಭೆ ನಡೆಸಲಿದೆ. ಈ ವೇಳೆ ದಿನಾಂಕ ನಿಗದಿಯಾಗಲಿದೆ. ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ನನಗೆ ಬಂದಿರುವ ಮಾಹಿತಿ ಪ್ರಕಾರ, ಆದಷ್ಟು ಬೇಗನೆ ಒಂದು ಸಭೆ ನಡೆಸಿ, ಈ ಬಗ್ಗೆ ತೀರ್ಮಾನವಾಗಲಿದೆ ಎಂದರು.

ಈಶ್ವರಪ್ಪ, ರಮೇಶ್​ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ. ಎಲ್ಲ ವಿಚಾರವನ್ನು ಕೇಂದ್ರ ನಾಯಕರಿಗೆ ತಿಳಿಸಿದ್ದೇವೆ. ಜಿಲ್ಲಾವಾರು, ಪ್ರಾದೇಶಿಕವಾರು ಹಾಗೂ ಸಾಮಾಜಿಕವಾಗಿ ಸ್ಥಾನ ನೀಡುವ ಬಗ್ಗೆಯೂ ಚರ್ಚೆಯಾಗಿದೆ. ವರಿಷ್ಠರಿಗೆ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಳೆದ ಡಿಸೆಂಬರ್​ 27 ರಂದು ದೆಹಲಿಗೆ ಭೇಟಿ ನೀಡಿದ್ದ ಸಿಎಂ, ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಬಳಿಕ ಮಾತನಾಡಿದ್ದ ಅವರು, 'ಸಚಿವ ಸಂಪುಟ ವಿಸ್ತರಣೆ ಒಂದು ಪ್ರಕ್ರಿಯೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಆಯಾಮಗಳನ್ನು ಗಮನದಲ್ಲಿರಿಸಿಕೊಂಡು ಹೈಕಮಾಂಡ್ ನಾಯಕರು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ. ಈಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಅಂತಿಮ ಘಟ್ಟಕ್ಕೆ ಬಂದಿದ್ದೇವೆ' ಎಂದು ಹೇಳಿದ್ದರು.

ಚುನಾವಣೆ ಲೆಕ್ಕಾಚಾರ: ಪ್ರಸ್ತುತ ಬೊಮ್ಮಾಯಿ ಸಂಪುಟದಲ್ಲಿ ಐದು ಸಚಿವ ಸ್ಥಾನಗಳು ಖಾಲಿ ಇವೆ. ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಜಾತಿ ಮತ್ತು ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಅದೇನೇ ಇದ್ದರೂ ಕೆಲವೇ ದಿನಗಳಲ್ಲಿ ಹೈಕಮಾಂಡ್‌ ಲೆಕ್ಕಾಚಾರ ಗೊತ್ತಾಗುತ್ತದೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ: ಸಿಎಂ ಬೊಮ್ಮಾಯಿ

ಈಶ್ವರಪ್ಪ, ಜಾರಕಿಹೊಳಿ, ಸಿಪಿವೈ ಅತೃಪ್ತಿ: ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಅನಗತ್ಯವಾಗಿ ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ರಮೇಶ್​ ಜಾರಕಿಹೊಳಿ ಬಹಿರಂಗವಾಗಿಯೇ ಹೈಕಮಾಂಡ್ ಮತ್ತು ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. 'ಇನ್ನೇನು ಚುನಾವಣೆ ಮೂರು ತಿಂಗಳು ಮಾತ್ರ ಉಳಿದಿದೆ. ಮುಂದಿನ‌ ಚುನಾವಣೆಯ ತಯಾರಿ ಮಾಡ್ಕೋಬೇಕು. ಸಚಿವ ಸಂಪುಟ ಒಂದು ವರ್ಷದ ಹಿಂದೆ ಆಗಿದ್ದರೆ ಅದಕ್ಕೆ ಅರ್ಥ ಇತ್ತು. ಈಗಾಗಲೇ ಕಾಲಾವಧಿ ಮುಗೀತಾ ಬರ್ತಿದೆ. ನಾನು ಸಂಪುಟ ಸೇರುವ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ' ಎನ್ನುವ ಮೂಲಕ ಶಾಸಕ ಸಿ.ಪಿ.ಯೋಗೇಶ್ವರ್ ಸಂಪುಟ ಸೇರಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವರ್ಷದ ಹಿಂದೆ ಆಗಿದ್ದರೆ ಅರ್ಥವಿತ್ತು, ಸಚಿವ ಆಗುವ ಆಸೆ ನನಗಿಲ್ಲ: ಸಿ ಪಿ ಯೋಗೇಶ್ವರ್ ಬೇಸರ

Last Updated : Jan 8, 2023, 7:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.