ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಹೋಟೆಲ್ ಒಂದರಲ್ಲಿ ಊಟ ಮಾಡುವ ವೇಳೆ ತಟ್ಟೆಯಲ್ಲಿ ಜಿರಳೆ ಪತ್ತೆಯಾಗಿದೆ.
ಹೊಸದುರ್ಗ ನಗರದ ನ್ಯೂ ಗುರುಪ್ರಸಾದ್ ಹೋಟೆಲ್ನಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ಮಾಲೀಕನ ವಿರುದ್ಧ ಗ್ರಾಹಕ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಆಹಾರ ಸೇವನೆ ಮಾಡುವಾಗ ದಿಢೀರ್ ಆಗಿ ಜಿರಳೆ ಕಾಣಿಸಿಕೊಂಡ ಬೆನ್ನಲ್ಲೇ ಹೋಟೆಲ್ನಲ್ಲಿ ಸ್ವಚ್ಛತೆಯಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.