ಚಿತ್ರದುರ್ಗ: ಕಂಟೇನರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ಜರುಗಿದೆ.
![ಸುಟ್ಟು ಕರಕಲಾದ ಲಾರಿ](https://etvbharatimages.akamaized.net/etvbharat/prod-images/kn-ctd-01-21-accident-av-7204336_21102020095759_2110f_1603254479_625.jpg)
ಕಂಟೇನರ್ ಲಾರಿಗೆ ಬಣ್ಣದ ಡಬ್ಬಗಳನ್ನು ಸಾಗಣಿಕೆ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಬಣ್ಣದ ಡಬ್ಬಗಳನ್ನು ಸಾಗಣೆ ಮಾಡುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಇಡೀ ಲಾರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
![ಸುಟ್ಟು ಕರಕಲಾದ ಬಣ್ಣದ ಡಬ್ಬಿಗಳು](https://etvbharatimages.akamaized.net/etvbharat/prod-images/kn-ctd-01-21-accident-av-7204336_21102020095759_2110f_1603254479_882.jpg)
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.