ಚಿತ್ರದುರ್ಗ: ಗ್ರೀನ್ ಝೋನ್ ಪ್ರದೇಶದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ ಮಧ್ಯೆ ಶೀತಲ ಸಮರ ಏರ್ಪಟ್ಟಿದೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬೇರೆ ಉದ್ಯೋಗ ಇಲ್ಲ. ಡಿಕೆಶಿ, ಸಿದ್ಧರಾಮಯ್ಯ ಬಡಿದಾಡುತ್ತಿದ್ದಾರೆ. ರಾಜಕಾರಣ ಬಿಟ್ಟು ಬೇರೇನಿಲ್ಲ. ಮದ್ಯದಂಗಡಿ ತೆರೆಯುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲವಿದೆ. ಮೊದಲು ಅವರಿಬ್ಬರು ಕುಳಿತು ಮಾತಾಡಿಕೊಂಡು ಹೇಳಲಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಟಾಂಗ್ ನೀಡಿದರು.