ಚಿತ್ರದುರ್ಗ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಎತ್ತಿನ ಗಾಡಿ ಮೇಲೆ ದ್ವಿಚಕ್ರ ವಾಹನ ಇರಿಸಿ ಹಾಗೂ ಸೈಕಲ್ ಸವಾರಿ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ಹಾಲಿ ಚಳ್ಳಕೆರೆ ಕೈ ಶಾಸಕ ರಘುಮೂರ್ತಿ, ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.