ETV Bharat / state

ಚಿತ್ರದುರ್ಗಲ್ಲಿಇಂದು ಹೊಸ ಕೇಸ್​ ಇಲ್ಲ:  ಇನ್ನೂ ವೈದ್ಯರ ಕೈ ಸೇರಬೇಕಿದೆ 286 ಜನರ ವರದಿ - Corona case not found today in Chitradurga

ಚಿತ್ರದುರ್ಗದಲ್ಲಿ ಈವರೆಗೆ ವರದಿಯಾದ ಒಟ್ಟು 10 ಪಾಸಿಟಿವ್ ಪ್ರಕರಣಗಳ ಪೈಕಿ ಒಬ್ಬರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 08 ಜನ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಒಬ್ಬರು ಉಡುಪಿ ಜಿಲ್ಲೆ ಮಣಿಪಾಲ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Corona case not found today in Chitradurga
ಚಿತ್ರದುರ್ಗಲ್ಲಿ ಇಂದು ಪತ್ತೆಯಾಗಿಲ್ಲ ಕೊರೊನಾ ಕೇಸ್​​
author img

By

Published : May 20, 2020, 9:30 PM IST

ಚಿತ್ರದುರ್ಗ : ಇಂದು ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೋಂಕು ದೃಢಪಟ್ಟ ಪ್ರಕರಣ ವರದಿಯಾಗಿಲ್ಲ. 146 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, 286 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು 10 ಪಾಸಿಟೀವ್ ಪ್ರಕರಣಗಳ ಪೈಕಿ ಒಬ್ಬರು ಈಗಾಗಲೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 08 ಜನ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಒಬ್ಬರು ಉಡುಪಿ ಜಿಲ್ಲೆ ಮಣಿಪಾಲ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ. 20 ರಂದು ಒಟ್ಟು 146 ಜನರ ಗಂಟಲುದ್ರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇದುವರೆಗೂ 2,323 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಈವರೆಗೆ 1,983 ಜನರ ವರದಿ ನೆಗಟಿವ್ ಎಂದು ವರದಿಯಾಗಿದೆ.

Corona case not found today in Chitradurga
ಕೊರೊನಾ ವರದಿ

286 ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಈವರೆಗೆ ಜಿಲ್ಲೆಯಲ್ಲಿ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹಿನ್ನೆಲೆ ಹೊಂದಿರುವ 7149 ಜನರನ್ನು ಹೋಂ ಕ್ವಾರಂಟೈನ್ ನಿಗಾನಲ್ಲಿ ಇರಿಸಲಾಗಿದ್ದು, 73 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

615 ಜನರಿಗೆ ಮೇ. 20 ರಂದು ಸ್ಕ್ರೀನಿಂಗ್ ಮಾಡಲಾಗಿದ್ದು, ಇದುವರೆಗೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಈ ಜಿಲ್ಲೆಗೆ ಆಗಮಿಸಿದ 248358 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಮೇ. 20 ರಂದು ಫೀವರ್ ಕ್ಲಿನಿಕ್‍ಗಳಲ್ಲಿ 257 ಜನರಿಗೆ ಜ್ವರ ತಪಾಸಣೆ ಮಾಡಿದ್ದು, ಇದುವರೆಗೂ ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ನಲ್ಲಿ ಒಟ್ಟು 15,031 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.