ಚಿತ್ರದುರ್ಗ: ಜಿಲ್ಲೆಯಲ್ಲಿ ಕಾಣಿಸಿಕೊಂಡ ಎಲ್ಲಾ ಕೊರೊನಾ ಸೋಂಕಿತರು ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲೆಯಲ್ಲಿ ಪತ್ತೆಯಾದ 40 ಪ್ರಕರಣಗಳ ಪೈಕಿ 39 ಮಂದಿ ಚೇತರಿಸಿಕೊಂಡು ಮನೆಗೆ ಹೋಗಿದ್ದಾರೆ. ಉಳಿದ ಒಂದು ಪ್ರಕರಣಕ್ಕೆ ಉಡುಪಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 39 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.
ಬುಧವಾರ (ಜೂನ್ 10) ಗುಣಮುಖರಾದ 12 ಮಂದಿಗೆ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಕೊಟ್ಟರು. ಉಡುಪಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಪ್ರಕರಣ ಚಿತ್ರದುರ್ಗಕ್ಕೆ ಸೇರದ (ಚಿಕಿತ್ಸೆಗೆ ಸಂಬಂಧಿಸಿದಂತೆ) ಕಾರಣ ಜಿಲ್ಲೆಯು ಸೋಂಕು ಪ್ರಕರಣಗಳಿಂದ ಮುಕ್ತವಾಗಿದೆ.