ಚಿತ್ರದುರ್ಗ : ಜಿಲ್ಲೆಯಲ್ಲಿಂದು 274 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 4,005ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗದ 75, ಹಿರಿಯೂರು 41, ಚಳ್ಳಕೆರೆ 66, ಮೊಳಕಾಲ್ಮೂರು 28, ಹೊಸದುರ್ಗ 46 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 18 ಸೇರಿ ಒಟ್ಟು 274 ಮಂದಿಗೆ ಸೋಂಕು ತಗುಲಿದೆ.
ಇಂದು 51 ಜನ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2,248 ಜನ ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಜಿಲ್ಲೆ ಒಟ್ಟು 35 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,722 ಸಕ್ರಿಯ ಪ್ರಕರಣಗಳಿವೆ.