ETV Bharat / state

ಕಾಲೇಜು ಆರಂಭ ಬೆನ್ನಲ್ಲೇ 17 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

author img

By

Published : Nov 21, 2020, 10:40 AM IST

Updated : Nov 21, 2020, 11:09 AM IST

ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

10:34 November 21

ಚಿತ್ರದುರ್ಗದಲ್ಲಿ ಈವರೆಗೆ 1265 ಜನ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಸಿಬ್ಬಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿದ್ದು, 17 ಜನ ವಿದ್ಯಾರ್ಥಿಗಳ ಕೋವಿಡ್ ವರದಿ ಪಾಸಿಟಿವ್ ಬಂದಿದೆ.

ಚಿತ್ರದುರ್ಗ: ನವೆಂಬರ್ 17 ರಿಂದ ಪದವಿ ಕಾಲೇಜುಗಳ ಆರಂಭವಾಗಿವೆ. ಆದರೆ, ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕಿದೆ‌. ಚಿತ್ರದುರ್ಗದಲ್ಲಿ ಈವರೆಗೆ 1265 ಜನ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಸಿಬ್ಬಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿದ್ದು, 17 ಜನ ವಿದ್ಯಾರ್ಥಿಗಳ ಕೋವಿಡ್ ವರದಿ ಪಾಸಿಟಿವ್ ಬಂದಿದೆ.

ಮಕ್ಕಳಲ್ಲಿ ಕೋವಿಡ್​ ಸೋಂಕು ದೃಢ ಪಟ್ಟಿರುವುದು ಪೋಷಕರ ಆತಂಕಕ್ಕೆ ಕಾರಣ ಆಗಿದೆ.  ಪರೀಕ್ಷೆ ಮಾಡಿಸಿದ್ದ ಪದವಿ ಕಾಲೇಜು ಸಿಬ್ಬಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿಲ್ಲ.  

ವರದಿ ಪಾಸಿಟಿವ್ ಬಂದಿದ್ದರಿಂದ 17 ಜನ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ. ಕೋವಿಡ್ ಪೀಡಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್​ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ಚಿತ್ರದುರ್ಗ ಡಿಹೆಚ್​​​​ಒ ಡಾ.ಪಾಲಾಕ್ಷರು ಮಾಹಿತಿ ನೀಡಿದರು. 

Last Updated : Nov 21, 2020, 11:09 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.