ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯೂರು ಮೂಲದ ವೈದ್ಯನಿಗೆ ಕೊರೊನಾ ಸೋಂಕು ತಗುಲಿದೆ.
ವೈದ್ಯನಿಗೆ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಹೊಸದುರ್ಗ ತಾಲೂಕು ಆಸ್ಪತ್ರೆಯಲ್ಲಿ ಗಂಟಲು ದ್ರವ ಪಡೆದು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಪರೀಕ್ಷಾ ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ.
ಇದರಿಂದ ಸೋಂಕಿತ ವೈದ್ಯನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಸಿಟಿವ್ ಪ್ರಕರಣದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಲಾಕ್ಷ ಮಾಹಿತಿ ನೀಡಿದ್ದಾರೆ.