ಶಿವಮೊಗ್ಗ/ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯಲ್ಲಿಂದು 145 ಜನರಲ್ಲಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 17,959ಕ್ಕೆ ಏರಿಕೆಯಾಗಿದೆ.
ಇಂದು 162 ಜನ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ 16,273 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 1 ಸಾವು ಸಂಭವಿಸಿದ್ದು, ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,376 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 145 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 77 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 116 ಜನ ಇದ್ದಾರೆ. ಮನೆಯಲ್ಲಿ 1,015 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 23 ಸೋಂಕಿತರಿದ್ದಾರೆ.
ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 6,992ಕ್ಕೆ ಏರಿಕೆಯಾಗಿದೆ. ಇದರಲ್ಲಿ 4,600 ಜೋನ್ ವಿಸ್ತರಣೆಯಾಗಿದೆ.
ತಾಲೂಕುವಾರು ಸೋಕಿತರ ಸಂಖ್ಯೆ:
ಶಿವಮೊಗ್ಗ-64
ಭದ್ರಾವತಿ-24
ಶಿಕಾರಿಪುರ-07
ತೀರ್ಥಹಳ್ಳಿ-11
ಸೊರಬ-07
ಸಾಗರ-26
ಹೊಸನಗರ-05
ಬೇರೆ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ 1 ಸೋಂಕಿತ ವ್ಯಕ್ತಿ ಆಗಮಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 159 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,858ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 128 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಒಟ್ಟು 590 ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ 159 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,858ಕ್ಕೆ ಏರಿಕೆಯಾಗಿದ್ದು, ಇದುವರೆಗೆ 46 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ ಈಗಾಗಲೇ 9,212 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,600 ಸಕ್ರಿಯ ಪ್ರಕರಣಗಳು ಇವೆ.