ETV Bharat / state

ದಾವಣಗೆರೆಯಲ್ಲಿ 58, ಚಿತ್ರದುರ್ಗದಲ್ಲಿ 84 ಜನರಿಗೆ ಕೊರೊನಾ ಸೋಂಕು ದೃಢ... - ದಾವಣಗೆರೆ ಕೊರೊನಾ ಲೇಟೆಸ್ಟ್​ ನ್ಯೂಸ್​

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ದಾವಣಗೆರೆ ಜಿಲ್ಲೆಯಲ್ಲಿ 314 ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸೋಂಕಿತರ ಸಂಖ್ಯೆ 19,936 ಕ್ಕೆ ಏರಿದೆ.

davanagere
ಕೋವಿಡ್​ ಆಸ್ಪತ್ರೆ
author img

By

Published : Oct 22, 2020, 11:43 PM IST

ಚಿತ್ರದುರ್ಗ/ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,633ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 237 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1,818 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 84 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 11,633ಕ್ಕೆ ಏರಿಕೆಯಾಗಿದೆ. ಇದುವರೆಗೆ 54 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 10,763 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು ಜಿಲ್ಲೆಯಲ್ಲಿ ಸದ್ಯ 815 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 87,529 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 95,355 ಜನರ ಮಾದರಿ ಸಂಗ್ರಹಿಸಲಾಗಿದ್ದು, 81,964 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 1,270 ಜನರ ವರದಿ ಬರುವುದು ಬಾಕಿ ಇದೆ. 488 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ 314 ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸೋಂಕಿತರ ಸಂಖ್ಯೆ 19,936 ಕ್ಕೆ ಏರಿದೆ. ದಾವಣಗೆರೆಯಲ್ಲಿ 58 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ದಾವಣಗೆರೆ 21, ಹರಿಹರ 14, ಜಗಳೂರು 2, ಚನ್ನಗಿರಿ 9 ಹಾಗೂ ಹೊನ್ನಾಳಿಯಲ್ಲಿ 12 ಜನರಲ್ಲಿ ವೈರಾಣು ಇರುವುದು ಖಚಿತವಾಗಿದೆ. ಹರಿಹರ ತಾಲೂಕಿನ ಜಿಗಳಿ ಗ್ರಾಮದ 70 ವರ್ಷದ ವೃದ್ಧೆ ಮೃತಪಟ್ಟಿದ್ದು, ಇದುವರೆಗೆ 253 ಮಂದಿ ಬಲಿಯಾಗಿದ್ದಾರೆ.

davanagere
ದಾವಣಗೆರೆ ಜಿಲ್ಲಾ ಆಸ್ಪತ್ರೆ

ದಾವಣಗೆರೆಯಲ್ಲಿ 164, ಹರಿಹರ 61, ಜಗಳೂರು 15, ಚನ್ನಗಿರಿ 33, ಹೊನ್ನಾಳಿ 39 ಹೊರ ಜಿಲ್ಲೆಯಿಂದ ಬಂದಿದ್ದ ಇಬ್ಬರು ಕೊರೊನಾ ವೈರಾಣುವಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ 963 ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ. 776 ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, 7,546 ಸ್ವ್ಯಾಬ್​ಗಳ ರಿಪೋರ್ಟ್​ಗೆ ಜಿಲ್ಲಾಡಳಿತ ಕಾಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.