ಚಿತ್ರದುರ್ಗ: ಜಿಲ್ಲಾ ಆರೋಗ್ಯ ಇಲಾಖೆ ಘೋಷಣೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ 23 ಮಂದಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದ್ದು, ಇಂದು 192 ಜನ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ 15, ಹೊಳಲ್ಕೆರೆ 01, ಚಳ್ಳಕೆರೆ 05, ಹಿರಿಯೂರು 01 ಹೊಸದುರ್ಗ 01, ಒಟ್ಟು 23 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,065 ಕ್ಕೆ ಏರಿಕೆಯಾಗಿದ್ದು, 2513 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನುಳಿದ 1517 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್- 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 35 ಜನ ಕೊನೆಯುಸಿರೆಳೆದಿದ್ದು, ಇತರೆ ಕಾರಣದಿಂದ ಒಬ್ಬರು ಸಾವನಪ್ಪಿದ್ದಾರೆ.