ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ ಭಾರಿ ಅವಘಡವೊಂದು ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತೆಕ್ಕಲವಟ್ಟಿ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ (55), ಸರೋಜಮ್ಮ (45) ದಾರುಣವಾಗಿ ಸಾವನ್ನಪ್ಪಿರುವ ದಂಪತಿ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಸರೋಜಮ್ಮ ದಾವಣಗೆರೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಮೃತರು ಸಣ್ಣ ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಬೆಂಕಿಯ ಝಳಕ್ಕೆ ಹೊರಬರಲಾಗದೆ ಪ್ರಕಾಶ್ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.