ವಿಜಯಪುರ, ಯಾದಗಿರಿ, ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿಧಾನವಾಗಿ ಇಳಿಕೆಯಾಗುತ್ತಿದ್ದು, ಗುರುವಾರದಂದು ವಿಜಯಪುರ- 93, ಬೀದರ್- 19 ಮತ್ತು ಯಾದಗಿರಿಯಲ್ಲಿ 68 ಸೋಂಕಿತರು ಗುಣಮುಖರಾಗಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಗುರುವಾರ 83 ಹೊಸ ಪ್ರಕರಣಗಳು ಪತ್ತೆಯಾಗಿ, ಒಟ್ಟಾರೆ ಸೋಂಕಿತರ ಸಂಖ್ಯೆ 11,882ಕ್ಕೆ ತಲುಪಿದೆ. 93 ಜನ ಗುಣಮುಖರಾಗಿದ್ದು, ಒಟ್ಟಾರೆ ಸಂಖ್ಯೆ 11,254ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಓರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 189ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 439 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ತಿಳಿಸಿದ್ದಾರೆ.
ಯಾದಗಿರಿಯಲ್ಲಿ 36 ಕೊರೊನಾ ಸೋಂಕು ದೃಢ
ಯಾದಗಿರಿ ಜಿಲ್ಲೆಯಲ್ಲಿ ಗುರುವಾರ 36 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 9,872ಕ್ಕೆ ಏರಿಕೆಯಾಗಿದೆ. ಇದೇ ದಿನ 68 ಜನ ಗುಣಮುಖರಾಗಿದ್ದು, ಈ ಸಂಖ್ಯೆ 9,479ಕ್ಕೆ ತಲುಪಿದೆ. ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ 60 ಮೃತಪಟ್ಟಿದ್ದಾರೆ. ಒಟ್ಟು 333 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್ನಲ್ಲಿ ನಿಯಂತ್ರಣಕ್ಕೆ ಬಂದ ಕೊರೊನಾ
ಕಳೆದ ಹಲವು ತಿಂಗಳಿಂದ ಸಾವಿರಗಳ ಗಡಿ ದಾಟಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದೆ. ಗುರುವಾರದವರೆಗೆ ಜಿಲ್ಲೆಯಲ್ಲಿ ಕೇವಲ 93 ಸಕ್ರಿಯ ಪ್ರಕರಣಗಳಿವೆ. ಹೊಸದಾಗಿ 6 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 19 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗಿ ಗುಣಮುಖರಾಗಿ ಬಿಡುಗಡೆ ಆಗುವವರ ಸಂಖ್ಯೆ ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 68,311 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 68,051 ಸೋಂಕಿತರು ಗುಣಮುಖರಾಗಿದ್ದಾರೆ. 163 ಜನ ಸಾವನಪ್ಪಿದ್ದು, ಇತರೆ ಕಾರಣಗಳಿಗೆ ನಾಲ್ವರು ಮೃತಪಟ್ಟಿದ್ದಾರೆ.