ಚಿತ್ರದುರ್ಗ : ನವೆಂಬರ್ 17ರಿಂದ ಪದವಿ ಕಾಲೇಜುಗಳ ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಕಾಲೇಜು ಆರಂಭವಾಗಿವೆ. ಆದ್ರೆ, ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಡಿಹೆಚ್ಒ ಡಾ.ಪಾಲಾಕ್ಷ ಅವರು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಈವರೆಗೆ 3867 ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಸಿಬ್ಬಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿದ್ದು, ಇಲ್ಲಿ ತನಕ ಒಟ್ಟು 47 ಜನ ವಿದ್ಯಾರ್ಥಿಗಳ ಕೋವಿಡ್ ವರದಿ ಪಾಸಿಟಿವ್ ಬಂದಿರುವುದು, ಆತಂಕಕ್ಕೆ ಕಾರಣವಾಗಿದೆ.
ಇನ್ನು, ಪರೀಕ್ಷೆ ಮಾಡಿಸಿದ್ದ ಪದವಿ ಕಾಲೇಜು ಸಿಬ್ಬಂದಿಯಲ್ಲಿ ಯಾವುದೇ ಕೋವಿಡ್ ಸೋಂಕು ಕಂಡು ಬಂದಿಲ್ಲ. ವರದಿ ಪಾಸಿಟಿವ್ ಬಂದಿದ್ದರಿಂದ 47 ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೋವಿಡ್ ಪೀಡಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದವರಿಗೂ ಕೂಡ ಹೋಂ ಕ್ವಾರಂಟೈನ್ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ಚಿತ್ರದುರ್ಗ ಡಿಹೆಚ್ಒ ಡಾ. ಪಾಲಾಕ್ಷ ಮಾಹಿತಿ ನೀಡಿದರು.