ETV Bharat / state

ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ..

author img

By

Published : Jan 4, 2021, 4:10 PM IST

ಕೇಂದ್ರ ಬಿಜೆಪಿ ಸರ್ಕಾರ ಮುಕ್ತ ಮಾರುಕಟ್ಟೆ ಜಾರಿ ಮಾಡಿ, ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡುವ ಹುನ್ನಾರ ಮಾಡುತ್ತಿದೆ ಎಂದು ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದರು..

Cycle Jatha by students in Chitradurga
ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ಚಿತ್ರದುರ್ಗ : ಕೇಂದ್ರ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ರೈತಪರ ಸಂಘಗಳು ನಗರದಲ್ಲಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದವು.

ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ..

ಓದಿ: ನೂತನ ಗ್ರಾಪಂ ಸದ್ಯಸರ ಸನ್ಮಾನ.. ಸಿದ್ದರಾಮಯ್ಯ ವಿರುದ್ಧ ಹೊಸ ಮೆಂಬರ್‌ ಅಸಮಾಧಾನ

ನಗರದ ಡಿಸಿ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ ಅವರು, ರೈತ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಸೈಕಲ್ ಮೂಲಕ ಜಿಲ್ಲೆಯ ವಿವಿಧ ಹಳ್ಳಿಗಳಿಗೆ ಸೈಕಲ್ ಮೂಲಕ ತೆರಳಿ ರೈತ ಕಾಯ್ದೆಗಳ ಜಾರಿ ಹಿಂಪಡೆಯುವಂತೆ ದೇಶ ಪ್ರೇಮಿ ಯುವ ಆಂದೋಲನ ಜಾಗೃತಿ ನಡೆಸುತ್ತಿದ್ದಾರೆ.

ದೆಹಲಿ ರೈತ ಹೋರಾಟದಲ್ಲಿ 40ಕ್ಕೂ ಅಧಿಕ ರೈತರು ಅಸುನೀಗಿದ್ದಾರೆ. ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗುತ್ತಿಲ್ಲ‌. ಇತ್ತ ಪ್ರತಿಭಟನಾಕಾರರಿಗೆ ನ್ಯಾಯ ಒದಗಿಸುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಮುಕ್ತ ಮಾರುಕಟ್ಟೆ ಜಾರಿ ಮಾಡಿ, ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡುವ ಹುನ್ನಾರ ಮಾಡುತ್ತಿದೆ ಎಂದು ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.