ಚಿತ್ರದುರ್ಗ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಜನ್ರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆಗಳು ಸಂವಿಧಾನ ವಿರೋಧಿಯಾಗಿರುವುದರಿಂದ ತಕ್ಷಣ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ಆಪತ್ತಿನಲ್ಲಿದ್ದು, ಸಂವಿಧಾನಕ್ಕೆ ಮಾರಕವಾಗಿರುವ ಕಾಯ್ದೆಗಳನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು.