ಚಿತ್ರದುರ್ಗ : ಕೊರೊನಾ ಸೋಂಕು ಪೀಡಿತ ರಾಜ್ಯಗಳು ಹಾಗೂ ಜಿಲ್ಲೆಗಳಿಗೆ ಸಂಚರಿಸುತ್ತಿರುವ ವಾಹನ ಚಾಲಕರು, ಕ್ಲೀನರ್ಗಳು ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮನವಿ ಮಾಡಿದ್ದಾರೆ.
ಕೋವಿಡ್-19 ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಲಾಕ್‍ಡೌನ್ ಜಾರಿಯಲ್ಲಿದೆ. ಕೃಷಿ ಉತ್ಪನ್ನಗಳು, ತರಕಾರಿ, ಹಣ್ಣುಗಳ ಸಾಗಾಟ ಸೇರಿದಂತೆ, ವೈದ್ಯಕೀಯ ತುರ್ತು ಸಂದರ್ಭಗಳಿಗೂ ವಾಹನಗಳ ಸಂಚಾರಕ್ಕೆ ಅನುಮತಿ ಮಾಡಿಕೊಡಲಾಗಿದೆ.
ನೆರೆ ಹೊರೆಯ ರಾಜ್ಯಗಳು ಹಾಗೂ ಹಲವು ಜಿಲ್ಲೆಗಳಲ್ಲಿ ವೈರಸ್ ಸೋಂಕು ವ್ಯಾಪಕವಾಗಿದೆ. ಉದ್ಯೋಗ ಹಾಗೂ ಆದಾಯಕ್ಕಾಗಿ ವಾಹನ ಚಾಲಕರು, ಕ್ಲೀನರ್ಗಳು ಸೋಂಕು ಪೀಡಿತ ರಾಜ್ಯ ಅಥವಾ ಜಿಲ್ಲೆಗಳಿಗೆ ಸಂಚರಿಸುವುದು ಅನಿವಾರ್ಯವಿರುತ್ತದೆ, ಹಾಗಾಗಿ ನೀವು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಕರೆ ನೀಡಿದರು.