ETV Bharat / state

ಅರಸು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ: ಶಶಿಕಲಾ ಸುರೇಶ್‍ಬಾಬು

ಚಿತ್ರದುರ್ಗ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡಿ.ದೇವರಾಜ್ ಅರಸು ಅವರ 105 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

Chitradurgha
Chitradurgha
author img

By

Published : Aug 20, 2020, 4:22 PM IST

ಚಿತ್ರದುರ್ಗ: ದೇವರಾಜ್ ಅರಸು ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಹರಿಕಾರ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅರಸು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಕರೆ ಕೊಟ್ಟರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ.ದೇವರಾಜು ಅರಸು ಅವರ 105 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ದೇವರಾಜ್ ಅರಸು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಅಭಿವೃದ್ಧಿಯ ಹರಿಕಾರರಾಗಿ ಗುರುತಿಸಿಕೊಂಡವರು. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡಿರುವ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕು ಎಂದು ಹೇಳಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಮಾದರಿಯಾಗಿದ್ದಾರೆ. ಅವರು ಮಾಡಿರುವ ಸಾಧನೆ ಶಾಶ್ವತವಾಗಿ ಉಳಿದಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.