ಚಿತ್ರದುರ್ಗ: ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ನಡೆಯಲಿರುವ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಯಾವುದೇ ಧಾರ್ಮಿಕ ಸಮಾರಂಭ ನಡೆಸದಂತೆ ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯ ಮೇ 03 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಿಆರ್ಪಿಸಿ 1973 ರ ಕಲಂ 144ರ ಮೇರೆಗೆ ಏಪ್ರಿಲ್ 14 ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ 05 ಕ್ಕೂ ಹೆಚ್ಚು ಜನ ಸೇರದಂತೆ ಆದೇಶಿಸಿದ್ದಾರೆ.
ಸಾರ್ವಜನಿಕರಿಗೆ ಅಗತ್ಯವಿರುವ ವಸ್ತುಗಳು, ಆಹಾರ ಸಾಮಗ್ರಿಗಳ ಪೂರೈಕೆ, ತುರ್ತು ಆರೋಗ್ಯ ಸೇವೆ, ಅಗ್ನಿಶಾಮಕ ಸೇವೆ, ಶವಸಂಸ್ಕಾರ ಇನ್ನಿತರೆ ಅಗತ್ಯ ಸೇವೆಗಳಿಗೆ ಸಡಿಲಿಕೆ ಇರಲಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.