ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಹಾಗೂ ವೇತನ ತಾರತಮ್ಯ ಕೈಬಿಡುವಂತೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೌಕರರು, ಬಜೆಟ್ನಲ್ಲಿ ಬೇಡಿಕೆ ಈಡೇರಿಕೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಸಿದರು.
ನಗರದ ಯೂನಿಯನ್ ಪಾರ್ಕ್ನಿಂದ ಗಾಂಧಿ ವೃತ್ತ, ಮಹಾವೀರ್ ವೃತ್ತ ಹಾಗೂ ಡಿಸಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.