ಚಿತ್ರದುರ್ಗ : ಕೋಟೆನಾಡಿಗೆ ಮೆಡಿಕಲ್ ಕಾಲೇಜು ಸ್ಥಾಪಿಸುವಂತೆ ಜಿಲ್ಲೆಯ ಜನತೆ ಹಲವು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿದ್ದರು. ಜನತೆಯ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ 2013ರಲ್ಲಿ ಚಿತ್ರದುರ್ಗ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿತು. ಬಳಿಕ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಆಸಕ್ತಿವಹಿಸದೇ, ಅಗತ್ಯ ಅನುದಾನ ಬಿಡುಗಡೆ ಮಾಡದೆ ಜಿಲ್ಲೆಯ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು.
ಕೋಟೆನಾಡು ಚಿತ್ರದುರ್ಗದ ನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹಲವು ವರ್ಷಗಳಿಂದ ಅನೇಕ ಜನರು ಹೋರಾಡಿದ್ದರು. ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಂತೆ ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಕಳೆದ ಎಂಟು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ, ಇದ್ಯಾವುದಕ್ಕೂ ಕ್ಯಾರೇ ಎನ್ನದ ರಾಜ್ಯ ಸರ್ಕಾರ ತನ್ನ ಹಳೆ ಚಾಳಿ ಮುಂದುವರಿಸಿತ್ತು.
ಓದಿ: 8 ವರ್ಷ ಕಳೆದ್ರೂ ಕೋಟೆನಾಡಿನಲ್ಲಿ ನಿರ್ಮಾಣವಾಗದ ಮೆಡಿಕಲ್ ಕಾಲೇಜು: ಜನಪ್ರತಿನಿಧಿಗಳು ಏನಂತಾರೆ?
ಕಳೆದ ವಾರದ ಹಿಂದಷ್ಟೇ ನಡೆದ ಸದನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಆಗ್ರಹಿಸಿದರು. ಕಾಲೇಜು ಸ್ಥಾಪನೆಗೆ ಹಣ ಬಿಡುಗಡೆ ವಿಚಾರದಲ್ಲಿ ಸರ್ಕಾರ ಮೌನಕ್ಕೆ ಶರಣಾಗಿತ್ತು. ಈ ಕುರಿತಾಗಿ 8 ವರ್ಷ ಗತಿಸಿದರೂ, ಕೋಟೆನಾಡಿನಲ್ಲಿ ನಿರ್ಮಾಣವಾಗದ ವೈದ್ಯಕೀಯ ಕಾಲೇಜು ಎಂಬ ಸುದ್ದಿಯನ್ನು ಈಟಿವಿ ಭಾರತ ಬಿತ್ತರಿಸಿತ್ತು.
ಓದಿ: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
ಜಿಲ್ಲೆಯ ಜನಪ್ರತಿನಿಧಿಗಳು ಸಿಎಂ ಕಚೇರಿಯ ಕದತಟ್ಟಿ ಕೋಟೆ ನಾಡಿಗೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಕೂಡ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣವಾಗದಿದ್ರೆ, ಜಿಲ್ಲೆಯ ಜನಪ್ರತಿನಿಧಿಗಳು ಬರುವ ಸದನದಿಂದ ದೂರ ಉಳಿಯುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.
ಓದಿ: ಮೆಡಿಕಲ್ ಕಾಲೇಜ್ ನಿರ್ಮಾಣವಾಗದಿದ್ದರೆ ಸದನ ಬಹಿಷ್ಕಾರ: ಶಾಸಕ ತಿಪ್ಪಾರೆಡ್ಡಿ
ಈಗ ಜಿಲ್ಲೆಗೆ ಸರ್ಕಾರ ಸಂತಸ ಸುದ್ದಿ ಕೊಟ್ಟಿದೆ. ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅಗತ್ಯ ಅನುದಾನ ಹಂಚಿಕೆ ಮಾಡಿ 2021- 22ನೇ ಸಾಲಿನ ಆಯವ್ಯಯ ಪಟ್ಟಿಯಲ್ಲಿ ಘೋಷಣೆ ಮಾಡಲು ಕ್ರಮಕೈಗೊಳ್ಳೋದಾಗಿ ಮುಖ್ಯಮಂತ್ರಿ ಬಿಎಸ್‌ವೈ ಜಿಲ್ಲೆಯ ಜನತೆಗೆ ಆಶ್ವಾಸನೆ ನೀಡಿದ್ದಾರೆ.
ಖುದ್ದಾಗಿ ಸಿಎಂ ಕೋಟೆನಾಡಿಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಸಕ್ತಿ ವಹಿಸಿರುವುದು ಜಿಲ್ಲೆಯ ಜನತೆಯ ಸಂತಸಕ್ಕೆ ಕಾರಣವಾಗಿದೆ. ಇನ್ನು, ಈಟಿವಿ ಭಾರತ ಮೆಡಿಕಲ್ ಕಾಲೇಜ್ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ವರದಿ ಬಿತ್ತರಿಸುತ್ತಿದ್ದಯಂತೆ ಸರ್ಕಾರ ಎಚ್ಚೆತ್ತು, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿರುವುದು ಕೂಡ ಇಲ್ಲಿ ಗಮನಾರ್ಹ.
ತಕ್ಷಣವೇ ಕಾಮಗಾರಿ ಆರಂಭಿಸಲು ಒತ್ತಾಯ: ರಾಜ್ಯಸರ್ಕಾರ ಕೋಟೆ ನಾಡಿಗೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಭರವಸೆ ನೀಡುತ್ತಿದ್ದಂತೆ ಜಿಲ್ಲೆಯ ಜನತೆ ಹಾಗೂ ಮೆಡಿಕಲ್ ಕಾಲೇಜುಗಳ ಹೋರಾಟ ಮಾಡಿದ ಹೋರಾಟಗಾರರಲ್ಲಿ ಮಂದಹಾಸ ಮೂಡಿದೆ. ಕಾಲೇಜು ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಅನುದಾನ ಬಿಡುಗಡೆ ಮಾಡಿ, ವೈದ್ಯಕೀಯ ಕಾಲೇಜು ನಿರ್ಮಾಣದ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ.
ಅಲ್ಲದೆ ನಿಗದಿತ ಅವಧಿಯಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವಂತೆ ಹೋರಾಟಗಾರರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈಟಿವಿ ಭಾರತ ಬಿತ್ತರಿಸಿದ ವರದಿಯನ್ನು ಸಂಘಟನೆಯ ಹೋರಾಟಗಾರರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

ಕಾಲೇಜು ನಿರ್ಮಾಣಕ್ಕೆ ಸಿಎಂ ಹಸಿರು ನಿಶಾನೆ ತೋರುವುದು ಬಿಜೆಪಿ ಹಿರಿಯ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ವ್ಯಕ್ತಪಡಿಸುತ್ತಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಸಿಎಂ ಮನೆಗೆ ಹೋಗಿ ಕಾಲೇಜು ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದೇವೆ. ತಕ್ಷಣವೇ ಮುಖ್ಯಮಂತ್ರಿ ನಮ್ಮ ಮನವಿಗೆ ಸ್ಪಂದಿಸಿದ್ದಾರೆ.
ಮುಂಬರುವ ಆಯವ್ಯಯ ಪಟ್ಟಿಯಲ್ಲಿ ಅಗತ್ಯ ಹಣ ಬಿಡುಗಡೆ ಮಾಡಿ ಕಾಲೇಜು ಕಟ್ಟಡ ಆರಂಭಕ್ಕೆ ಹಸಿರು ನಿಶಾನೆ ತೋರುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ ಎಂದು ಶಾಸಕ ತಿಪ್ಪಾರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.