ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರ್ವೊಂದು ಡಿಕ್ಕಿ ಹೊಡೆದಿರುವ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಉಳಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಐಮಂಗಲ ಬಳಿ ಈ ಘಟನೆ ನಡೆದಿದೆ. ಕಾರಲ್ಲಿದ್ದ ಮತ್ತೆ ಮೂವರಿಗೆ ಗಂಭೀರವಾದ ಗಾಯಾಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರು ಬೆಂಗಳೂರಿನಿಂದ ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದ ದುರ್ಗಾದೇವಿ ಜಾತ್ರೆಗಾಗಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ರಸ್ತೆಯಲ್ಲಿ ದಿಢೀರ್ ಆಗಿ ಕಾರು ಹಂದಿ ಅಡ್ಡ ಬಂದಿರುವ ಪರಿಣಾಮ ಕಾರು ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವಾರ ಕೂಡ ಈ ಹೆದ್ದಾರಿಯಲ್ಲಿ ಕಾರ್ವೊಂದು ಚಿರತೆಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.