ಚಿತ್ರದುರ್ಗ: ಕೊರೊನಾ ಸೋಂಕು ತಡೆಗೆ ಜಾರಿಯಲ್ಲಿರುವ ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ಬರದನಾಡು ಚಿತ್ರದುರ್ಗದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಚಿಕ್ಕಮ್ಮನಹಳ್ಳಿ ಗ್ರಾಮದ ಜಮೀನಿನಲ್ಲಿ ಸಿಹಿ ಕುಂಬಳಕಾಯಿ ಕೊಳೆಯುತ್ತಿದ್ದು, ರೈತನ ನೋವು ಕೇಳುವವರಿಲ್ಲದಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಸಿಹಿಗುಂಬಳ ಬೆಳೆದು ಮಾರುಕಟ್ಟೆಗೆ ಸಾಗಿಸಲಾಗದೇ ಕಂಗಾಲಾಗಿದ್ದಾನೆ. ರೈತ ವಿರೇಶ್ ಸರ್ಕಾರದ ಹೆಲ್ಪ್ಲೈನ್ಗೆ ಮಾಹಿತಿ ನೀಡಿ ಐದು ದಿನ ಕಳೆದರೂ ಅಧಿಕಾರಿಗಳು ಮಾತ್ರ ಸ್ಪಂದಿಸಿಲ್ಲ ಎಂದು ಅವರು ದೂರಿದ್ದಾರೆ.
ಸಿಹಿಗುಂಬಳ ಖರೀದಿಸುವುದಾಗಿ ಹೇಳಿದ್ದ ಅಧಿಕಾರಿಗಳ ಭರವಸೆ ಹುಸಿಯಾಗಿದ್ದು, ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ಲಾಕ್ಡೌನ್ನಿಂದಾಗಿ ಬೆಳೆ ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಸರ್ಕಾರ ತಕ್ಷಣ ನಷ್ಟ ಭರಿಸಿಕೊಡಬೇಕೆಂದು ಅವರು ಒತ್ತಾಯಿಸಿದರು.