ಚಿತ್ರದುರ್ಗ : ಭೂ ಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ರೈತರು ಬೀದಿಗಿಳಿದು ಪ್ರತಿಭಟಿಸಿದ್ದಾರೆ.
ನಗರದ ಪ್ರವಾಸಿ ಮಂದಿರದ ಬಳಿ ಪ್ರತಿಭಟಿಸಿ ಶಾಸಕ ತಿಪ್ಪಾರೆಡ್ಡಿ ಮೇಲೆ ಒತ್ತಡ ಹೇರುವ ಮೂಲಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡದಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಧರಣಿಯಲ್ಲಿ 50ಕ್ಕೂ ಹೆಚ್ಚು ರೈತರು ಶಾಸಕರಿಗೆ ಮನವಿ ಸಲ್ಲಿಸಿ, ಈ ಕಾಯ್ದೆ ಜಾರಿಯಾದ್ರೆ ಸಣ್ಣ ಹಾಗೂ ಅತಿ ಸಣ್ಣ ರೈತರು ಬೀದಿಪಾಲಾಗುತ್ತಾರೆ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರು.