ETV Bharat / state

50 ಸಾವಿರ ಚರ್ಮ ಕುಶಲಕರ್ಮಿಗಳಿಗೆ ಆರ್ಥಿಕ ನೆರವು: ಜೂ. 15ರೊಳಗೆ ಅರ್ಜಿ ಸಲ್ಲಿಸಲು ಇಲಾಖೆ ಸೂಚನೆ

ಈ ಪರಿಹಾರ ಹಣವನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿ, ಡಿಬಿಟಿ ಮುಖಾಂತರ ಪಾರದರ್ಶಕವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು. ಡಾ. ಬಾಬು ಜಗಜೀವನ ರಾಮ್​​ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಅಗತ್ಯ ಕ್ರಮ ವಹಿಸಲಾಗುತ್ತಿದ್ದು, ಫಲಾನುಭವಿಗಳು ದಿನಾಂಕ 3-6-2021ರಿಂದ 15/6/2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Statement by Minister B. Sriramulu
ಸಚಿವ ಬಿ.ಶ್ರೀರಾಮುಲು ಹೇಳಿಕೆ
author img

By

Published : Jun 4, 2021, 7:21 AM IST

ಚಿತ್ರದುರ್ಗ: ಮಹಾಮಾರಿ ಕೊರೊನಾ ರೋಗವನ್ನು ನಿಯಂತ್ರಣಗೊಳಿಸಲು ಎರಡನೇ ಬಾರಿಗೆ ಜಾರಿಗೊಳಿಸಲಾಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಸ್ತೆ ಬದಿ, ಹೋಟೆಲ್, ಬಸ್ ನಿಲ್ದಾಣ ಮತ್ತಿತರ ಪ್ರದೇಶಗಳಲ್ಲಿ ಚರ್ಮಗಾರಿಕೆಯಲ್ಲಿ ತೊಡಗಿಸಿಕೊಂಡ ಸುಮಾರು 50,000 ಚರ್ಮ ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ಪರಿಹಾರವಾಗಿ ಕುಟುಂಬಗಳಿಗೆ ತಲಾ 2 ಸಾವಿರ ರೂ. ಆರ್ಥಿಕ ನೆರವು ನೀಡಲು 10 ಕೋಟಿ ರೂ. ಬಿಡುಗಡೆ ಮಾಡಿದ್ದು, ಪರಿಹಾರಧನ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

50 ಸಾವಿರ ಚರ್ಮ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ಘೋಷಿಸಿದ ರಾಜ್ಯ ಸರ್ಕಾರ

ಚರ್ಮ ಕುಶಲಕರ್ಮಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ ನೆರವಾಗುವಂತೆ ತಾವು ಸಲ್ಲಿಸಿದ ಪ್ರಸ್ತಾವನೆಗೆ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ, ಅನುಮೋದನೆ ನೀಡಿ ನೆರವಾಗಲು ಅನುದಾನವನ್ನೂ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮುದಾಯದ ಪರವಾಗಿ ಅಭಿನಂದನೆ. ಈ ಪರಿಹಾರ ಹಣವನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿ, ಡಿಬಿಟಿ ಮುಖಾಂತರ ಪಾರದರ್ಶಕವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು. ಡಾ. ಬಾಬು ಜಗಜೀವನ ರಾಮ್​​ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಅಗತ್ಯ ಕ್ರಮ ವಹಿಸಲಾಗುತ್ತಿದ್ದು, ಫಲಾನುಭವಿಗಳು ದಿನಾಂಕ 3-6-2021ರಿಂದ 15/6/2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಫಲಾನುಭವಿಗಳು ಪರಿಹಾರಧನವನ್ನು ಪಡೆಯಲು ಅರ್ಜಿಗಳನ್ನು ತಮ್ಮ ಮೊಬೈಲ್​ನಿಂದ/ ಬೆಂಗಳೂರು ಒನ್/ ಕರ್ನಾಟಕ ಒನ್ /ಗ್ರಾಮ ಒನ್/ಸಿಟಿಜನ್ ಸರ್ವೀಸ್ ಸೆಂಟರ್ ಕೇಂದ್ರಗಳ ಮೂಲಕ ಸಲ್ಲಿಸಬಹುದಾಗಿದೆ. ಲಿಡ್ಕರ್ ಸಂಸ್ಥೆಯ ಜಿಲ್ಲಾ ಸಂಯೋಜಕರು ಸಂಪೂರ್ಣ ಮಾಹಿತಿಯೊಂದಿಗೆ ಹೆಲ್ಪ್ ಡೆಸ್ಕ್​​​​ನಂತೆ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದ್ದು, ಫಲಾನುಭವಿಗಳಿಗೆ ಯೋಜನೆಯ ವಿವರ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ. ಯಾವುದೇ ವಿಳಂಬ ಮಾಡದೇ ಈ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಕೂಡಲೇ ಪರಿಹಾರಧನವನ್ನು ಅವರ ಖಾತೆಗಳಿಗೆ ಜಮೆ ಮಾಡುವಂತೆ ಲಿಡ್ಕರ್ ಸಂಸ್ಥೆಗೆ ಸೂಚಿಸಲಾಗಿದೆ ಎಂದರು.

ಈ ಪರಿಹಾರಧನವನ್ನು ಸದ್ಬಳಕೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡಲು ಮನವಿ ಮಾಡಿದ ಸಚಿವರು, ಇನ್ನು ಮುಂದೆಯೂ ತಮ್ಮ ಉದ್ಯೋಗ ಮುಂದುವರೆಸಲು ಮತ್ತು ಆರ್ಥಿಕವಾಗಿ ಸದೃಢರಾಗಲು ಅವಶ್ಯಕವಿರುವ ಯೋಜನೆಗಳನ್ನು /ಕಾರ್ಯಕ್ರಮಗಳನ್ನು ಸರ್ಕಾರವು ನೀಡಲಿದೆ. ತಮ್ಮ ಸಂಕಷ್ಟಗಳಿಗೆ ಸ್ಪಂದಿಸಿ ಸದಾ ನಿಮ್ಮೊಂದಿಗೆ ನಮ್ಮ ಸರ್ಕಾರ ಇರಲಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವೈಯಕ್ತಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ, ವೈಯಕ್ತಿಕ ಸ್ಪಚ್ಛತೆ ಕಾಪಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ನೆರವಾಗುವಂತೆ ಸಚಿವ ಶ್ರೀರಾಮುಲು ಮನವಿ ಮಾಡಿದರು.

ಕೆಪಿಸಿಸಿ ಅದ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದೆ. ಕೊವಿಡ್ ಸಂದರ್ಭ ಬಳಸಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಪಿಎಂ ಮೋದಿ, ಸಿಎಂ ಬಿಎಸ್​​​ವೈಗೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಿತ್ತಿದ್ದಾರೆ. ಕೊವಿಡ್ ಸಂದಿಗ್ಧತೆ ವೇಳೆ ಜನರ ಜೀವದ ಜತೆ ರಾಜಕಾರಣ ಬೇಡ. ಅಧಿಕಾರ ಇಂದು ಇರುತ್ತದೆ, ನಾಳೆ ಇರುವುದಿಲ್ಲ. ಮೊದಲ ಜನರ ಜೀವ ಉಳಿಸಬೇಕಾಗಿದೆ ಎಂದರು.

ಇದೇ ವೇಳೆ MLC ಬಿ.ಕೆ.ಹರಿಪ್ರಸಾದ್ ಅವರೇ ನಿಮ್ಮ ಬುದ್ಧಿ ಒಳ್ಳೆತನಕ್ಕೆ ಮಾತ್ರ ಬಳಸಿ. ಕೊವಿಡ್ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ ಎಂದು ಒಂದು ಸಮುದಾಯಕ್ಕೆ ಲಸಿಕೆ ಎಂಬ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದರು. ಆರೋಗ್ಯ ಇಲಾಖೆಯಿಂದ ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗ್ತಿದೆ. ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ. ಬಿಜೆಪಿ ಮಾತು ಕೇಳಿ ಲಸಿಕೆ ಪಡೆದರೆ ಜೀವ ಉಳಿಯುತ್ತವೆ ಎಂದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.