ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅವಘಡದಿಂದ ಬಾಣಂತಿ ಮತ್ತು ಆಕೆಯ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ದೀಪಾ ಹಚ್ಚುವ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, 12 ದಿನದ ಗಂಡು ಮಗು ಸೇರಿದಂತೆ ತಾಯಿ ಅಸುನೀಗಿದ್ದಾರೆ. ಅವಘಡದಲ್ಲಿ ಮಗು ಸ್ಥಳದಲ್ಲೇ ಸಾವನಪ್ಪಿದ್ದರೇ, ತಾಯಿ ಗೌರಮ್ಮ(20) ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಮಾಹಿತಿ ತಿಳಿದು ಚಳ್ಳಕೆರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಕೊಂಡಿದ್ದಾರೆ.