ಚಿತ್ರದುರ್ಗ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ 25ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ಹಿರಿಯೂರು ತಾಲೂಕಿನ ಜವಗೊಂಡನ ಹಳ್ಳಿ ಬಳಿಯ ಸುವರ್ಣಮುಖಿ ನಗರದಲ್ಲಿ ನಡೆದಿದೆ.
ಘಟನೆಯಿಂದ ಸುಮಾರು 25ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.ಇನ್ನು ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಗುಡಿಸಲಿನಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಓರ್ವನಿಗೆ ಗಾಯಗಳಾಗಿವೆ. ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜವಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.